Thursday, June 4, 2026
Homeಕರಾವಳಿಬೆಳ್ತಂಗಡಿ: ಕೊರೊನಾ ಸೋಂಕಿಗೆ ಅಳದಂಗಡಿಯ ವ್ಯಕ್ತಿ ಬಲಿ

ಬೆಳ್ತಂಗಡಿ: ಕೊರೊನಾ ಸೋಂಕಿಗೆ ಅಳದಂಗಡಿಯ ವ್ಯಕ್ತಿ ಬಲಿ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಎಲ್ಲರಲ್ಲೂ ಆತಂಕ ಮನೆ ಮಾಡುತ್ತಿದೆ. ಸೋಂಕಿನಿಂದ ಬಳಲುತ್ತಿದ್ದ ಕರಂಬಾರ್ ಗ್ರಾಮದ ಅಳದಂಗಡಿ 40 ವರ್ಷದ ವ್ಯಕ್ತಿಯೊಬ್ಬರು ಇಂದು ಸಾವಿಗೀಡಾಗಿದ್ದಾರೆ.

ಜ್ವರ, ಕೆಮ್ಮು, ಕಫ, ತೀವ್ರ ಉಸಿರಾಟದ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಇವರನ್ನು ಜುಲೈ 15 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆ ವೆನ್ಲಾಕ್ ಗೆ ದಾಖಲಾಗಿಸಿ, ತೀರ್ವ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಚಿಕಿತ್ಸೆ ನೀಡಿದ್ದರೂ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!