ಬೆಳ್ತಂಗಡಿ: ಕಣಿಯೂರಿನಲ್ಲಿ ಅಂಗಡಿ ವ್ಯಾಪಾರ ನಡೆಸುತ್ತಿದ್ದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಪ್ರವೀಣ್ ಗೌಡ ಅವರ ಮೇಲೆ 28-07-2024 ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನ್ಯಾಯಾಲಯ ತಲಾ 6 ತಿಂಗಳ ಜೈಲು ಶಿಕ್ಷೆ ಮತ್ತು ರೂ 5 ಸಾವಿರ ದಂಡ ವಿಧಿಸಿ ಆದೇಶಿಸಿದ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಜಿಲ್ಲಾ ಕೋರ್ಟ್ ಗೆ ಜೂ. 19ರಂದು ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
ಪ್ರಕರಣ ವಿವರ:
ಕಣಿಯೂರಿನಲ್ಲಿ ಅಂಗಡಿ ವ್ಯಾಪಾರ ನಡೆಸುತ್ತಿದ್ದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಪ್ರವೀಣ್ ಗೌಡ ಅವರ ಮೇಲೆ 28-07-2024 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಸಹಚರರಾದ ಕಿರಣ್ ಶಿಶಿಲ, ಪ್ರಜ್ವಲ್ ಕೆವಿ ಗೌಡ ಮತ್ತು ರಾಧಾಕೃಷ್ಣ ಗೌಡ ಬರಮೇಲು ರವರು ಪ್ರವೀಣ್ ರವರ ಅಂಗಡಿ ಗೆ ಪ್ರವೇಶಿಸಿ ” ನೀನು ಮಹೇಶಣ್ಣ ನ ಬಗ್ಗೆ ಬಾರಿ ಮಾತನಾಡುತ್ತೀಯ ” ನೀನು ಪಂಚಾಯತ್ ಮೆಂಬರ್ ಎಂದು ಹಾರಾಡಬೇಡ ಎಂದು ರಾಡ್ ನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಎ.1 ರಂದು ಕಿರಣ್ ಶಿಶಿಲ ಪ್ರಕರಣದ ವಿಚಾರಣೆಗೆ ಸರಿಯಾಗಿ ಹಾಜರಾಗದ ಕಾರಣ ಆತನ ವಿರುದ್ಧ ಪ್ರತ್ಯೇಕ ವಿಭಜಿತ ಪ್ರಕರಣ ದಾಖಲಿಸಿ, ಉಳಿದ ಆರೋಪಿಗಳಾದ ಪ್ರಜ್ವಲ್ ಕೆವಿ ಗೌಡ ಮತ್ತು ರಾಧಾಕೃಷ್ಣ ಗೌಡ ಬರಮೇಲು ಅವರ ಮೇಲಿನ ಪ್ರಕರಣ ದ ವಿಚಾರಣೆಯನ್ನು ಕೈಗೊಂಡು ಜೂನ್ 2 ರಂದು ಅಂತಿಮ ಆದೇಶ ಮಾಡಿತ್ತು.ಆದೇಶದ ಪ್ರಕಾರ ಪ್ರಜ್ವಲ್ ಕೆ. ವಿ ಗೌಡ ಹಾಗೂ ರಾಧಾಕೃಷ್ಣ ಗೆ ತಲಾ 6 ತಿಂಗಳ ಜೈಲು ಶಿಕ್ಷೆ ಮತ್ತು ರೂ 5 ಸಾವಿರ ದಂಡ ವಿಧಿಸಿ ಆದೇಶಿಸಿತ್ತು.