Friday, August 21, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆಟೋ ಚಾಲಕನ ಬಂಧನ

ಬೆಳ್ತಂಗಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆಟೋ ಚಾಲಕನ ಬಂಧನ

- Advertisement -
- Advertisement -

ಬೆಳ್ತಂಗಡಿ:: ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಎಸಗಿದ್ದ ಆಟೋ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

14 ವರ್ಷದ ಅಪ್ರಾಪ್ತ ಬಾಲಕಿಯು ಈತನ ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದಾಗ ಆರೋಪಿಯು ಅನುಚಿತವಾಗಿ ವರ್ತಿಸಿ, ಜೀವಬೆದರಿಕೆ ಒಡ್ಡಿದ್ದನು. ಬಳಿಕ ಆಗಸ್ಟ್ 13ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಬೆದರಿಸಿ ಅತ್ಯಾಚಾರ ಎಸಗಿದ್ದನು.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆ. 15ರಂದು ವೇಣೂರು ಠಾಣೆಯಲ್ಲಿ BNS ಹಾಗೂ ಪೋಕ್ಸೋ ಕಾಯಿದೆಯಡಿ ಪ್ರಕರಣ (ಅ.ಕ್ರ: 56/2026) ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ತಕ್ಷಣ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!