Monday, June 8, 2026
Homeಕರಾವಳಿಮಂಗಳೂರುಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹ*ತ್ಯೆ

ಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹ*ತ್ಯೆ

- Advertisement -
- Advertisement -

ಬೆಳ್ತಂಗಡಿ; ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಮಾ.1ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್ ಅವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು.ಪ್ರಕಾಶ್ ಬದ್ಯಾರು ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು. ಪೂಜಾ ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ ದಂಪತಿಯ ಪುತ್ರಿಯಾಗಿದ್ದು, 10 ತಿಂಗಳ ಹಿಂದೆ ಇವರ ವಿವಾಹವಾಗಿತ್ತು. ಪೂಜಾ ಸಾವಿನ ಬಗ್ಗೆ ಸಂಶಯವಿದೆ ಎಂದು ಹೆತ್ತವರು ಆರೋಪಿಸಿದ್ದಾರೆ. ಬೆಂಗಳೂರು ಜಾಲಹಳ್ಳಿ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!