Thursday, June 4, 2026
Homeಕರಾವಳಿಬೆಳ್ತಂಗಡಿ: ಬಿಲ್ಲವ ಸಂಘದಿಂದ ದಿನಸಿ ಸಾಮಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ಬಿಲ್ಲವ ಸಂಘದಿಂದ ದಿನಸಿ ಸಾಮಗ್ರಿಗಳ ಕಿಟ್ ವಿತರಣೆ

- Advertisement -
- Advertisement -

ಬೆಳ್ತಂಗಡಿ: ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕಿನ 7 ಜಿಲ್ಲಾ ಪಂಚಾಯತ್, ಮತ್ತು ನಗರ ಪಂಚಾಯತ್ ವ್ಯಾಪ್ತಿಯ ಸುಮಾರು 2000 ಅರ್ಹ ಬಡ ಕುಟುಂಬಗಳಿಗೆ ರೂ 7.50 ಲಕ್ಷ ಮೌಲ್ಯದ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ತಾಲೂಕಿನ ಏಳೂ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಅತ್ಯಂತ ಬಡವರಾಗಿರುವ ಎರಡು ಸಾವಿರ ಕುಟುಂಬಗಳನ್ನು ಗುರುತಿಸಿ ದಿನಸಿ ಕಿಟ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ ಅಧ್ಯಕ್ಷತೆ ವಹಿಸಿದ್ದರು. ಯುವ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷ ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್, ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ಸಂಘದ ಮಾಜಿ ಅಧ್ಯಕ್ಷರುಗಳಾದ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಭಗೀರಥ ಜಿ, ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ ಕುರ್ತೋಡಿ, ಸಂತೋಷ್ ಕುಮಾರ್ ಕಾಪಿನಡ್ಕ, ಸಂಘದ ಉಪಾಧ್ಯಕ್ಷ ಮನೋಹರ ಇಳಂತಿಲ, ಕೋಶಾಧಿಕಾರಿ ಚಿದಾನಂದ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಾರಾಯಣ ಸುವರ್ಣ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ರಂಜಿತ್ ಹೆಚ್ ಡಿ, ವಾಹನ ನಿರೀಕ್ಷಕ ಕೆ ಚರಣ್ ಕುಮಾರ್, ಸಂಘದ ನಿರ್ದೇಶಕರುಗಳು, ಗ್ರಾಮ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು.

- Advertisement -

Latest News

error: Content is protected !!