Saturday, August 8, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

ಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.

ಮೃತ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್  ಗೌಡ (52) ಎಂಬವರಾಗಿದ್ದಾರೆ.ಈತ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಕೆಲಸಕ್ಕೆಂದು ಹೋಗಿದ್ದವರು ಆ 5 ರಂದು ಅಲ್ಲಿಂದ ಮನೆಗೆಂದು ಹೊರಟು ಬಂದಿದ್ದು ಮನೆಗೆ  ಬಂದಿರಲಿಲ್ಲ ಇವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ.

ನಾಪತ್ತೆಯಾಗಿದ್ದ ಚಿದಾನಂದ ಯಾನೆ ಉಮೇಶ ಅವರ ಮೃತದೇಹ ಆ 8ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ನದಿ ಬದಿಯಲ್ಲಿ ಪೊದೆಯಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು ಆತನ‌ ಪತ್ನಿ ಭವಾನಿ ಮೃತದೇಹವನ್ನು ಗುರುತಿಸಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಪರೀತ ಕುಡಿತದ ಚಟ ಹೊಂದಿದ್ದ ಈತ ನೀರಿಗೆ ಕಾಲುಜಾರಿ ಬಿದ್ದು ಅಥವಾ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!