- Advertisement -


- Advertisement -
ಬೆಳ್ತಂಗಡಿ: ಬೈಕ್ ಗೆ ಕಾರು ಡಿಕ್ಕಿಯಾಗಿ, ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ಧರ್ಮಸ್ಥಳ ಗ್ರಾಮದ ಬೋಳಿಯಾರ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಕಳಂಜ ಗ್ರಾಮ ನಿವಾಸಿ ಮಂಜುನಾಥ (38) ಎಂಬವರು, ದಿನಾಂಕ: 08.03.2026 ರಂದು ರಾತ್ರಿ ಸಮಯ, ತನ್ನ ಬೈಕ್ ನಲ್ಲಿ ಧರ್ಮಸ್ಥಳ ಕಡೆಯಿಂದ ಕಳಂಜ ಕಡೆಗೆ ಬರುತ್ತಿದ್ದಾಗ, ಬೆಳ್ತಂಗಡಿ ಧರ್ಮಸ್ಥಳ ಗ್ರಾಮದ ಬೋಳಿಯಾರ ಎಂಬಲ್ಲಿಗೆ ತಲುಪುತ್ತಿದ್ದಂತೆ, ಕಾರು ಚಾಲಕ ಸಚೀನ ಎಂಬವರು ಅಜಾಗರೂಕತೆ ಹಾಗು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು, ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಮಂಜುನಾಥ್ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಕಾರಿನ ಚಾಲಕ ಮತ್ತು ಅಲ್ಲಿ ಸೇರಿದ ಸಾರ್ವಜನಿಕರು ಉಪಚರಿಸಿ ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
- Advertisement -


