Thursday, June 4, 2026
Homeಕರಾವಳಿಬೆಳ್ತಂಗಡಿಯ ಓರ್ವ ಕೊರೊನಾ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಬೆಳ್ತಂಗಡಿಯ ಓರ್ವ ಕೊರೊನಾ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿತ ಗುಣಮುಖನಾಗಿದ್ದು, ಇನ್ನೂ ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ಯುವಕ ಗುಣಮುಖನಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾನೆ.
ಮಾ.‌ 21ರಂದು ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಈತ ಬಸ್ ಮೂಲಕ ಸ್ವಗ್ರಾಮಕ್ಕೆ ಬಂದಿದ್ದ. ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಈತ ಮಾ. 24ರಂದು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ.ಈತನ ಗಂಟಲು ದ್ರವವನ್ನು ಮಾ. 27ರಂದು ಪರೀಕ್ಷೆ ಮಾಡಿದಾಗ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು.
ಈತನ ಗಂಟಲು ದ್ರವವನ್ನು ಚಿಕಿತ್ಸೆ ಸಮಯದಲ್ಲಿ ಎರಡು ಬಾರಿ ಪ್ರಯೋಗಾಲಯಕ್ಕೆ ಕಳುಹಿಸಿದಾಗ ಅದು ನೆಗೆಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಈತ ಗುಣಮುಖನಾಗಿದ್ದಾನೆ ಎಂದು ಘೋಷಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

- Advertisement -

Latest News

error: Content is protected !!