Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

- Advertisement -
- Advertisement -

ಬೆಳ್ತಂಗಡಿ : ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲಾದ ಘಟನೆ ಬೆಳ್ತಂಗಡಿಯ ಪಜೀರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜೀರಡ್ಕದ ನೇತ್ರಾವತಿ ನದಿಯಲ್ಲಿ ಮೇ.19 ರಂದು ಸಂಜೆ 4 ಗಂಟೆ ಸುಮಾರಿಗೆ ಏಳು ಸ್ನೇಹಿತರ ತಂಡ ಈಜಲು ಹೋಗಿದ್ದು ಅದರಲ್ಲಿ ಉಜಿರೆ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್(ಈಸಿಎ) ವಿದ್ಯಾರ್ಥಿ ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ(21) ಎಂಬಾತ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಸ್ಥಳೀಯರು,ಅಗ್ನಿಶಾಮಕ ದಳ, ಶೌರ್ಯ ವಿಪತ್ತು ಪಡೆ ಆಗಮಿಸಿ ರಾತ್ರಿ 9:40ಕ್ಕೆ ಮೃತದೇಹವನ್ನು ಹೊರ ತೆಗೆದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!