Tuesday, June 9, 2026
Homeಕರಾವಳಿಮಂಗಳೂರು ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

 ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

ಬೆಳ್ತಂಗಡಿ; ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:22.06.2025ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಜುನೈಡ್ ದಂತವೈದ್ಯರು, ಡಾ.ರಯಾನ್, ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ.. ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಯೆನೆಪೋಯ ಸಂಸ್ಥೆಯ ಸಮಾಜ ಸೇವಕರಾದ ಶ್ರೀಯುತ ಭರತ್ ಮತ್ತು ದಿವ್ಯರವರು, ಸಂಸ್ಥೆಯ ವೈದ್ಯರಾದ ಡಾ.ಶಿವಾನಂದಸ್ವಾಮಿಯವರು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ.ಯವರು ಕಾರ್ಯಕ್ರಮ ನಿರೂಪಿಸಿದರು.

- Advertisement -

Latest News

error: Content is protected !!