Saturday, June 6, 2026
Homeಕರಾವಳಿಬೆಳ್ತಂಗಡಿ: SSLC ಪರೀಕ್ಷೆಯಲ್ಲಿ ಸರಕಾರಿ ಪ್ರೌಢ ಶಾಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದ ಶೈವಿಗೆ...

ಬೆಳ್ತಂಗಡಿ: SSLC ಪರೀಕ್ಷೆಯಲ್ಲಿ ಸರಕಾರಿ ಪ್ರೌಢ ಶಾಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದ ಶೈವಿಗೆ ಸನ್ಮಾನ

- Advertisement -
- Advertisement -

ಬೆಳ್ತಂಗಡಿ: ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.), ತಾಲೂಕು ಯುವ ವೇದಿಕೆ, ತಾಲೂಕು ಮಹಿಳಾ ವೇದಿಕೆ ಮತ್ತು ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ವತಿಯಿಂದ 2019 – 20ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯಲ್ಲಿ ಸರಕಾರಿ ಪ್ರೌಢ ಶಾಲಾ ವಿಭಾಗದಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕೊಯ್ಯೂರು ಗ್ರಾಮದ ಬಜಿಲ ನಿವಾಸಿ ಶ್ರೀಯುತ ಗೋಪಾಲ ಗೌಡರ ಪುತ್ರಿ ಕು.ಶೈವಿ ಇವರನ್ನು ಶಾಲು ಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ತಾಲೂಕು ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಅಭಿನಂದಿಸಿದರು.

ಈ ಸಂದರ್ಭದಲ್ಲಿ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಗೌಡ, ತಾಲೂಕು ಯುವ ವೇದಿಕೆಯ ಅಧ್ಯಕ್ಷರಾದ ಯಶವಂತ್ ಬಿ.ಟಿ, ಕಾರ್ಯದರ್ಶಿ ದಿನೇಶ್ ಕೊಯ್ಯೂರು, ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶೋಭಾ ನಾರಾಯಣ ಗೌಡ, ಕಾರ್ಯದರ್ಶಿ ಶ್ರೀಮತಿ ಗೀತಾ ರಾಮಣ್ಣ ಗೌಡ, ವಾಣಿ ಸೌಹಾರ್ದ ಕೋ-ಆಪರೇಟೀವ್ (ಲಿ.)ನ ನಿರ್ದೇಶಕರುಗಳಾದ ಗೋಪಾಲಕೃಷ್ಣ ಜಿ.ಕೆ ಉಜಿರೆ ಮತ್ತು ಸುರೇಶ್ ಕೌಡಂಗೆ, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ತಾಲೂಕು ಪಂಚಾಯತ್ ಸದಸ್ಯರಾದ ಪ್ರವೀಣ್ ಮಾವಿನಕಟ್ಟೆ, ಸ್ಥಳೀಯ ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀ ನಾರಾಯಣ ಗೌಡ ಮೈಂದಕೋಡಿ , ಸ್ಪಂದನಾ ಸೇವಾ ಸಂಘದ ಸದಸ್ಯರು ಮತ್ತು ಸ್ಥಳೀಯ ಕೊಯ್ಯೂರು ಗ್ರಾಮದ ಗೌಡ ಜಾತಿಯ ಗಣ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!