Thursday, September 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವಿಠಲ ಗೌಡರಿಗೆ ಕಾರಾಗೃಹ ಶಿಕ್ಷೆ ಪ್ರಕರಣ; ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಳ್ತಂಗಡಿ : ವಿಠಲ ಗೌಡರಿಗೆ ಕಾರಾಗೃಹ ಶಿಕ್ಷೆ ಪ್ರಕರಣ; ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು.ಸೌಜನ್ಯ ಮಾವ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದ್ದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಹೈಕೋರ್ಟ್ ಮಧ್ಯಂತರ  ತಡೆಯಾಜ್ಞೆ ನೀಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧ ವಿಧಿಸಿದ್ದರೂ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಕ್ಕಾಗಿ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ 17-01-2026 ರಂದು ಒಂದು ತಿಂಗಳ ಸಜೆ ವಿಧಿಸಿ 8 ತಿಂಗಳ ಹಿಂದೆ ಆದೇಶ ನೀಡಿದ್ದು ಬಳಿಕ ತಲೆ ಮರೆಸಿಕೊಂಡಿದ್ದರು.ಈ ಹಿನ್ನೆಲೆಯಲ್ಲಿ ವಿಠಲ ಗೌಡ ಅವರನ್ನು ಬಂಧಿಸಲು ಜೂ.27ರಂದು ಬೆಂಗಳೂರಿನಿಂದ ಕೋರ್ಟ್ ಅಧಿಕಾರಿಗಳೊಂದಿಗೆ ಆಗಮಿಸಿದ್ದ ಪೊಲೀಸರು ವಿವಿಧೆಡೆ ಶೋಧ ನಡೆಸಿದ್ದರು.

ಈ ಮಧ್ಯೆ ಬೆಂಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ವಿಠಲ ಗೌಡ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ವಿಠಲ ಗೌಡ ಅವರ ಅರ್ಜಿಯನ್ನು ಪುರಸ್ಕರಿಸಿದ್ದು ಬೆಂಗಳೂರು ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಆದೇಶಕ್ಕೆ ಸೆ.22 ರಂದು ಮಧ್ಯಂತರ ತಡೆ ನೀಡಿದೆ.

- Advertisement -

Latest News

error: Content is protected !!