Monday, June 22, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ; ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಅಭಿನಂದನಾ ಕಾರ್ಯಕ್ರಮ

- Advertisement -
- Advertisement -

ಬೆಳ್ತಂಗಡಿ; ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ  ಶಾಲೆಯಲ್ಲಿ ಜೂ.20 ರಂದು  ವಿವಿಧ ಸಂಘಗಳ ಉದ್ಘಾಟನೆ ಮತ್ತು 2025- 26 ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ‘ಅಭಿನಂದನಾ ಕಾರ್ಯಕ್ರಮ’ ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು  ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನ ಅಧಿಕಾರಿಗಳಾದ ಧನ್ಯಕುಮಾರ್ ಉದ್ಘಾಟಿಸಿದರು,

ನಂತರ ಮಾತನಾಡಿ, ಪ್ರತಿಭೆಗಳನ್ನು ವ್ಯಕ್ತಪಡಿಸಲು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಂಘ ಚಟುವಟಿಕೆಗಳು ಉತ್ತಮ ವೇದಿಕೆ ಆಗಿದೆ ಎಂದು ತಿಳಿಸಿ, ಉತ್ತಮ ಫಲಿತಾಂಶ ನೀಡಿದ  ವಿದ್ಯಾರ್ಥಿಗಳಿಗೆ ಅಭಿನಂದಿಸಿ , ಶುಭಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಒಳ್ಳೆಯ ಅನುಭವ ಪಡೆಯಬಹುದು ಎಂದು ತಿಳಿಸಿ, ಉತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳನ್ನು ಮತ್ತು ಶ್ರಮಿಸಿದ ಅಧ್ಯಾಪಕರನ್ನು ಅಭಿನಂದಿಸಿದರು.612 ಅಂಕಗಳನ್ನು ಪಡೆದ ರಕ್ಷಾ ಎನ್ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ ಕುರ್ಕಿಲ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಶಿಕ್ಷಕರಾದ ಕೋಕಿಲ ಸ್ವಾಗತಿಸಿ, ಐಶ್ವರ್ಯ ವಂದಿಸಿದರು.  ಸುಮನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು.

- Advertisement -

Latest News

error: Content is protected !!