Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

- Advertisement -
- Advertisement -

ಬೆಳ್ತಂಗಡಿ; ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದಿನಾಂಕ: 08.03.2026 ರಂದು ಸರಳವಾಗಿ ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಯು.ಸಿ. ಪೌಲೋಸ್ ಹಾಗೂ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಮಹಿಳೆಯರ ಗೌರವವನ್ನು ಸ್ಮರಿಸಲಾಯಿತು ಹಾಗೂ ಎಲ್ಲರಿಗೂ ಸಿಹಿ ಹಂಚುವ ಮೂಲಕ ಸಂತೋಷವನ್ನು ಹಂಚಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ  ಡಾ. ಯು.ಸಿ. ಪೌಲೋಸ್ ಅವರು ಮಾತನಾಡಿ, “ಮಹಿಳೆಯರು ಕುಟುಂಬದ ಬೆನ್ನೆಲುಬು ಮಾತ್ರವಲ್ಲ, ಸಮಾಜದ ನಿರ್ಮಾಣದಲ್ಲಿಯೂ ಪ್ರಮುಖ ಪಾತ್ರವಹಿಸುತ್ತಾರೆ. ತಾಯಿ, ಸಹೋದರಿ, ಗುರು ಮತ್ತು ಸೇವಾ ಮನೋಭಾವದ ಪ್ರತಿರೂಪವಾಗಿ ಮಹಿಳೆಯರು ಸಮಾಜವನ್ನು ಬೆಳಗಿಸುತ್ತಿದ್ದಾರೆ. ಮಹಿಳೆಯರ ಗೌರವ, ಸಮಾನತೆ ಮತ್ತು ಸಬಲೀಕರಣವು ಸಮಾಜದ ಪ್ರಗತಿಗೆ ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಹಾಗೂ ಸಂದರ್ಶಕರಾಗಿ ಆಗಮಿಸಿದ ಸೈಂಟ್ ಲಾರೆನ್ಸ್ ಚರ್ಚ್ ಬೋಂದೆಲ್ ಇಲ್ಲಿನ ಸೈಂಟ್ ಸೆಬಾಸ್ಟಿನ್ ವಾರ್ಡ್ ನ ಸದಸ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!