Sunday, June 7, 2026
Homeಕರಾವಳಿಬೆಳ್ತಂಗಡಿ: ಜೂನಿಯರ್ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಬೆಳ್ತಂಗಡಿ: ಜೂನಿಯರ್ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿನಿಯೋರ್ವರು ಗುರುವಾರ ಬೆಳಿಗ್ಗೆ ಕಾಲೇಜಿಗೆಂದು ಹೊರಟುಹೋದವರು, ಕಾಲೇಜಿಗೂ ಹೋಗದೆ ಇತ್ತ ಹಾಸ್ಟೆಲ್ ಗೂ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹಾಸ್ಟೆಲ್ ನಲ್ಲಿ ಕರ್ತವ್ಯನಿರ್ವ ಹಿಸುತ್ತಿದ್ದ ವಾರ್ಡನ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂಡಿಗೆರೆ ನಿವಾಸಿ ಕಿಟ್ಟ ಎನ್ ರವರ ಪುತ್ರಿ ಸಿಂಧು(17. ವ)ಎಂಬವರು ನ. 17 ರಂದು ಬೆಳ್ತಂಗಡಿ ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಕ್ಕೆ ಸೇರ್ಪಡೆಗೊಂಡಿದ್ದರು. ಬೆಳಿಗ್ಗೆ ಎಂದಿನಂತೆ ಹಾಸ್ಟೆಲ್ ನ ಇತರ ವಿದ್ಯಾರ್ಥಿಗಳ ಜೊತೆಗೆ ಕಾಲೇಜಿಗೆಂದು ತೆರಳಿದ್ದರು. ಆದರೆ ಸಂಜೆ 5. 00 ಗಂಟೆಯವರೆಗೂ ಈಕೆ ಮರಳಿ ಬಾರದೇ ಇದ್ದು, ಅತ್ತ ಕಾಲೇಜಿಗೂ ಹೋಗದೆ ಇತ್ತ ಹಾಸ್ಟೆಲ್ ಗಾಗಲೀ, ಹೆತ್ತವರ ಮನೆಗೂ ಹೋಗದೆ ನಾಪತ್ತೆಯಾಗಿರುತ್ತಾರೆ ಎಂಬುವುದಾಗಿ ಹಾಸ್ಟೆಲ್ ವಾರ್ಡನ್ ಶುಭಾ ನಾಯಕ್ ರವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ.

- Advertisement -

Latest News

error: Content is protected !!