- Advertisement -
![]()
- Advertisement -
ಶಿವಮೊಗ್ಗ ನಗರದ ಹೊಸಮನೆ ದಿಡ್ಡಮ್ಮ ದೇವಸ್ಥಾನದ ಗೋಪುರ ಕೆಲಸದ ವೇಳೆ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ.ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ನಾಗೇಶ್ (48) ಎಂದು ಗುರುತಿಸಲಾಗಿದೆ.
ನಾಗೇಶ್ ಅವರು ದೇವಸ್ಥಾನದ ಗೋಪುರದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ಜೂ.5ರಂದು ಶುಕ್ರವಾರ ಶಿವಮೊಗ್ಗಕ್ಕೆ ಬಂದಿದ್ದರು.
ದೇವಾಲಯದ ಕೆಲಸದ ವೇಳೆ ಕಲ್ಲನ್ನು ತೆಗೆದುಕೊಂಡು ರಿವರ್ಸ್ ಹೋಗುವ ವೇಳೆ ಎಡವಿ ಬಿದ್ದು ಕ್ರೇನ್‌ಗೆ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯ ಬಗ್ಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Advertisement -


