Thursday, October 8, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಬೆಳ್ತಂಗಡಿ : ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ: ಮನೆಯ ಬಳಿಯ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಅಜಿಕುರಿ ಬಳಿಯ ನಝಿರ್(38) ಎಂಬವರು ಅ.4 ಭಾನುವಾರ ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದ ಪರಿಣಾಮ ವಿದ್ಯುತ್ ಶಾಕ್‌ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅ.8 ರ ಗುರುವಾರ ಬೆಳಗ್ಗಿನ ಜಾವ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!