Friday, June 5, 2026
Homeಕರಾವಳಿಮಂಗಳೂರು; ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿ ಬಳಿ ಪತ್ತೆ

ಮಂಗಳೂರು; ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿ ಬಳಿ ಪತ್ತೆ

- Advertisement -
- Advertisement -

ಮಂಗಳೂರು; ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಬಳಿ ಪತ್ತೆಯಾಗಿದೆ.ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬಳಂಜ ನಿವಾಸಿ ರಾಜೇಶ್ (27) ಮೃತ ಯುವಕ.

ರಾಜೇಶ್ ಶುಕ್ರವಾರ ಸಂಜೆ 4 ಗಂಟೆ ವೇಳೆಗೆ ಮನೆಯಿಂದ ತೆರಳಿದವರು ಬಳಿಕ ನಾಪತ್ತೆಯಾಗಿದ್ದರು.

ಈ ಬಗ್ಗೆ ಅವರ ಪೋಷಕರು ಪೂಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಈ ನಡುವೆ ಶನಿವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ರಾಜೇಶ್ ಅವರ ಬೈಕ್ ಪತ್ತೆಯಾಗಿತ್ತು.

ಇಂದು ಬೆಳಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದರು. ಈ ಬಗ್ಗೆ ರಾಜೇಶ್ ಪೋಷಕರಿಗೆ ಪೊಲೀಸರು ಮಾಹಿತಿ ನೀಡಿದ್ದು, ಅದರಂತೆ ಅವರು ಆಗಮಿಸಿ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!