Saturday, June 6, 2026
Homeಕರಾವಳಿಬೆಳ್ತಂಗಡಿ: ಆಸ್ಪತ್ರೆಯಿಂದ ಪರಾರಿಯಾಗಿದ್ದ ಬಾಣಂತಿ ಮಹಿಳೆ ಮತ್ತೆ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಆಸ್ಪತ್ರೆಯಿಂದ ಪರಾರಿಯಾಗಿದ್ದ ಬಾಣಂತಿ ಮಹಿಳೆ ಮತ್ತೆ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಬಾಣಂತಿ ಮಹಿಳೆಯೊಬ್ಬರಿಗೆ ಕೊರೋನಾ ದೃಢವಾಗುತ್ತಿದ್ದಂತೆ ಆಕೆಯ ಗಂಡ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಿಂದ ಬಲವಂತವಾಗಿ ಕರೆದೊಯ್ದ ಘಟನೆ ನಿನ್ನೆ ತಡರಾತ್ರಿ ನಡೆದಿತ್ತು.

ಆದರೆ ಇಂದು ಸ್ಥಳೀಯ ಶಾಸಕ ಹರೀಶ್ ಪೂಂಜರ ಮನವಿಯ ಮೇರೆಗೆ ಮತ್ತೆ ಆ ಬಾಣಂತಿ ಮಹಿಳೆ ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೋನಾ ದೃಢವಾದ ತಕ್ಷಣ ಭಯದಿಂದ ಏನು ಮಾಡಲು ತೋಚದೆ ಬಾಣಂತಿ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯಿಂದ ಕರೆದೊಯ್ದಿದ್ದರು. ವಿಷಯ ತಿಳಿದ ಕೂಡಲೇ ಮದ್ಯ ಪ್ರವೇಶಿಸಿದ ಶಾಸಕರು, ಕೊರೋನಾ ಸೋಂಕಿನ ತೀವ್ರತೆ ಮತ್ತು ಚಿಕಿತ್ಸೆಯ ಮಹತ್ವವನ್ನು ಮಹಿಳೆಯ ಕುಟುಂಬಸ್ಥರಿಗೆ ಮನಮುಟ್ಟುವಂತೆ ತಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!