
ಬೆಳ್ತಂಗಡಿ:: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಜರಗಿತು. ಈ ಕಾರ್ಯಕ್ರಮವು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಅವರ ನೇತೃತ್ವದಲ್ಲಿ ನಡೆಯಿತು.
ಹೊಸದಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿಗಳ ನಾಯಕ ಲವಿತ್ ಮತ್ತು ಉಪ ನಾಯಕ ಪರಶುರಾಮ ಹಾಗೂ ಮಂತ್ರಿಮಂಡಲದ ಸರ್ವ ಸದಸ್ಯರು ಪ್ರಮಾಣವಚನವನ್ನು ಸ್ವೀಕರಿಸಿದರು. ಶಾಲೆಯ ಕರ್ತವ್ಯ, ಶಿಸ್ತು, ಜವಾಬ್ದಾರಿ ಸರಿಯಾಗಿ ನಿಭಾಯಿಸುವುದಾಗಿ ಪ್ರತಿಜ್ಞೆ ಮಾಡಿದರು. ಈ ಪ್ರತಿಜ್ಞಾವಿಧಿಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ . ಎನ್ ನಿರ್ವಹಿಸಿದರು. ಶಾಲಾ ಶಿಕ್ಷಕ ವೃಂದದವರು, ಎಸ್ ಡಿ ಎಮ್ ಸಿ ಯ ಅಧ್ಯಕ್ಷರು ಶ್ರೀ ಕೆ ನಂದ ಮಕ್ಕಳಿಗೆ ಶುಭವನ್ನು ಹಾರೈಸಿದರು. ಶಿಕ್ಷಕ ವೃಂದದವರು, ಜೊತೆಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹ ಶಿಕ್ಷಕ ನಾಗರಾಜ್ ಬಾರ್ಕೆರ್ ಕಾರ್ಯಕ್ರಮವನ್ನು ನಿರೂಪಿಸಿದರು.


