Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಮೇಲೆರಗಿದ ಓಮ್ನಿ ಕಾರು- ಬಾಲಕಿಗೆ ಗಂಭೀರ ಗಾಯ

ಬೆಳ್ತಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಮೇಲೆರಗಿದ ಓಮ್ನಿ ಕಾರು- ಬಾಲಕಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಓಮ್ನಿ ಕಾರೊಂದು ಎರಗಿದ್ದು- ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಮೂವರು ಪವಾಡ ಸದೃಶ್ಯ ಪಾರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಲ್ಪದ ಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ.ಕು.ಮರಿಯಾ (17) ಗಂಭೀರ ಗಾಯಗೊಂಡ ಬಾಲಕಿ.

 ಬೊಲೆರೋ ಜೀಪ್‌ನಿಂದ ಇಳಿದ ಇಬ್ಬರು ಬಾಲಕಿಯರು ಹಾಗೂ ಇಬ್ಬರು ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.‌ ಈ ವೇಳೆ ಅತೀ ವೇಗವಾಗಿ ಬಂದ ಓಮ್ನಿ ಕಾರು ಸಣ್ಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಏಕಾಏಕಿ ಈ ನಾಲ್ವರು ಪಾದಚಾರಿಗಳ ಮೇಲೆರಗಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಯುವತಿಯೊಬ್ಬರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಆದರೆ ಓರ್ವ ಯುವತಿ ಓಮ್ನಿ ಕಾರಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಅಲ್ಲೇ ಇದ್ದ ರಿಕ್ಷಾದಲ್ಲಿ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

- Advertisement -

Latest News

error: Content is protected !!