Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ: ದೂರುದಾರನ ಹೇಳಿಕೆಯಂತೆ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭ

ಬೆಳ್ತಂಗಡಿ: ದೂರುದಾರನ ಹೇಳಿಕೆಯಂತೆ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಆ.8 ರಂದು ಸಾಕ್ಷಿ ದೂರುದಾರನೊಂದಿಗೆ  ಎಸ್.ಐ.ಟಿ ತಂಡ ಆಗಮಿಸಿದೆ.ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ಸಾಕ್ಷಿ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ಸಾಕ್ಷಿ ದೂರುದಾರನನ್ನು ಕರೆತಂದಿದ್ದಾರೆ.

ಇಲ್ಲಿ ಸಾಕ್ಷಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬುದು ಕುತೂಹಲ ಮೂಡಿಸಿದೆ.

- Advertisement -

Latest News

error: Content is protected !!