ಬೆಳ್ತಂಗಡಿ: ಕೊರೋನಾ ಸೋಂಕು ಪ್ರಕರಣವನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ವಸ್ತುಗಳನ್ನು ಸಾರ್ವಜನಿಕರಿಗೆ ಪೂರೈಸುವುದಕ್ಕೆ ಸಂಬಂಧಿಸಿದಂತೆ ನೇಮಿಸಲಾಗಿದ್ದ ಸ್ವಯಂಸೇವಕರ ನೇಮಕಾತಿಯನ್ನು ರದ್ದುಗೊಳಿಸುವಂತೆ ತಾಲೂಕು ದಂಡಾಧಿಕಾರಿಯವರು ಆದೇಶ ನೀಡಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿಗಳು, ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ತಾಲೂಕಿನಾದ್ಯಂತ ಕೈಗೊಳ್ಳಬೇಕಾದ ಕ್ರಮಗಳನ್ನು ಅನುಷ್ಠಾನ ಗೊಳಿಸುವಂತೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿಯವರಿಗೆ ಸೂಚಿಸಲಾಗಿತ್ತು.
ಅದರಂತೆ ಸಂಬಂಧಿಸಿದ ಅಧಿಕಾರಿಗಳು 100 ಮನೆಗಳಿಗೆ ಒಬ್ಬರಂತೆ ಸ್ವಯಂ ಸೇವಕರನ್ನು ಆಯ್ಕೆ ಮಾಡಿದ್ದರು. ಪ್ರಸ್ತುತ ಜಿಲ್ಲಾಧಿಕಾರಿಯವರು ಅಗತ್ಯ ವಸ್ತುಗಳನ್ನು ಖರೀದಿಸಲು ನಿಗದಿತ ಕಾಲಾವಧಿಯನ್ನು ನೀಡಿರುವುದರಿಂದ ಅಗತ್ಯ ವಸ್ತು ಖರೀದಿಗೆ ಸ್ವಯಂ ಸೇವಕರ ಅಗತ್ಯತೆ ಇರುವುದಿಲ್ಲ ಹಾಗೂ ಈಗಾಗಲೇ ಸ್ವಯಂ ಸೇವಕರ ಸೇವೆಗೆ ಎಂದು ಗುರುತಿಸಿ ಗ್ರಾಮ ಪಂಚಾಯಿತಿ ಮೂಲಕ ನೀಡಿರುವ ಗುರುತಿನ ಚೀಟಿಗಳು ದುರುಪಯೋಗವಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಈ ಸ್ವಯಂ ಸೇವಕರ ನೇಮಕಾತಿಯನ್ನು ರದ್ದುಗೊಳಿಸಿರುತ್ತಾರೆ.
(ನಿರ್ಬಂಧವಿರುವ ಕರಾಯ- ತಣ್ಣೀರುಪಂತ ಗ್ರಾಮದ ವ್ಯಾಪ್ತಿಯ 10 ಜನ ಸ್ವಯಂ ಸೇವಕರನ್ನು ಹೊರತುಪಡಿಸಿ)
ಬೆಳ್ತಂಗಡಿ: ಸ್ವಯಂ ಸೇವಕರ ನೇಮಕಾತಿ ರದ್ದುಗೊಳಿಸುವಂತೆ ಆದೇಶ
- Advertisement -
- Advertisement -
- Advertisement -