Monday, April 29, 2024
Homeಕರಾವಳಿಬೆಳ್ತಂಗಡಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ ಕಾರ್ಯಕ್ರಮ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನಲ್ಲಿ ಕೋವಿಡ್ ಸೋಂಕಿತರಿಗೆ ನೆರವಾಗಲು ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 82 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ ಕಾರ್ಯಕ್ರಮ ಮೇ.24 ರಂದು ಜರುಗಿತು.

ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರ ಸಹಕಾರದಿಂದ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ದ.ಕ.ಜಿಲ್ಲೆಯ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ 82 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕ ನಿರ್ಮಿಸಲು ಅನುಮೋದನೆ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ರವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಇ.ಪಿ.ಶೆಟ್ಟಿ, ಸಹಾಯಕ ಎಂಜಿನಿಯರ್‌ಗಳಾದ ರಾಜೇಶ್ ರೈ, ಗೋಪಾಲಕೃಷ್ಣ, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ತಹಶೀಲ್ದಾರ್ ಮಹೇಶ್ ಜೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯಾನಂದ ಗೌಡ, ನ.ಪಂ ಮುಖ್ಯಾಧಿಕಾರಿ ಹೆಚ್ ಸುಧಾಕರ್, ಆರೋಗ್ಯ ಇಲಾಖೆ ಸಂಯೋಜಕ ಅಜಯ್, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಎಂಜಿನಿಯರ್‌ಗಳು, ನ.ಪಂ ಸದಸ್ಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!