
ಬೆಳ್ತಂಗಡಿ; ಬೆಳ್ತಂಗಡಿ; ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಹೋದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳ್ತಂಗಡಿ ಠಾಣಾ ಪೊಲೀಸರು ಗುರುವಾಯನಕೆರೆ ಎಂಬಲ್ಲಿ ನಡೆದಿದೆ.
ದಿನಾಂಕ: 13. 08.2025 ರಂದು ಬೆಳಿಗ್ಗೆ, ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ, KA 19 MP 2084ನೇ ನೋಂದಣಿ ಸಂಖ್ಯೆಯ ಇನ್ನೋವಾ ಕಾರಿನಲ್ಲಿ, ಚಿಕ್ಕಮಗಳೂರಿನ ಮುಡಗೇರಿ ಎಂಬಲ್ಲಿಂದ ಮೂರು ದನಗಳನ್ನು ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ತುಂಬಿಸಿಕೊಂಡು, ಅತೀವೇಗದಲ್ಲಿ ಹಾಗೂ ದುಡುಕುತನದಲ್ಲಿ ವಾಹನ ಚಲಾಯಿಸಿದರೆ ಮಾನವ ಜೀವಕ್ಕೆ ಅಪಾಯವಿರುತ್ತದೆ ಎಂದು ತಿಳಿದಿದ್ದರು ಕೂಡಾ ಚಾರ್ಮಾಡಿ ಮೂಲಕ ಮಂಗಳೂರು ಕಡೆಗೆ ಅತೀವೇಗ ಹಾಗೂ ದುಡುಕುತನದಲ್ಲಿ ಚಲಾಯಿಸಿಕೊಂಡು ಹೋಗಿದ್ದು, ಮಾಹಿತಿ ಪಡೆದ ಎಂಬಲ್ಲಿ ಕಾರನ್ನು ನಿಲ್ಲಿಸಲು ಸೂಚಿಸಿರುತ್ತಾರೆ. ಈ ವೇಳೆ ವಾಹನವನ್ನು ನಿಲ್ಲಿಸದೇ ಪರಾರಿಯಾಗುವ ಪ್ರಯತ್ನದಲ್ಲಿ ಒಂದು ಅಟೋರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿರುತ್ತದೆ. ಈ ವೇಳೆ ಪೋಲಿಸರನ್ನು ದೂಡಿಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನದಲ್ಲಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರು ಪರಾರಿಯಾಗಿದ್ದು, ಕಾರನ್ನು ಚಾಲಾಯಿಸುತ್ತಿದ್ದ ಮೂಡಬಿದ್ರೆ ಸುವರ್ಣ ನಗರ ನಿವಾಸಿ ಆರಿಫ್ (26) ಎಂಬಾತನನ್ನು ವಶಕ್ಕೆ ಪಡೆದಿರುತ್ತಾರೆ. ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿದ್ದು, ಪರಾರಿಯಾದ ಆರೋಪಿಗಳ ಬಗ್ಗೆ ವಿಚಾರಿಸಲಾಗಿ ಅವರುಗಳು ಮೂಡಬಿದ್ರೆ ಸುವರ್ಣ ನಗರ ನಿವಾಸಿಗಳಾಗಿದ್ದು, ರಜ್ವಾನ್ (30) ಹಾಗು ಸಾಯಿಲ್ (22)ಎಂಬುದಾಗಿ ತಿಳಿದುಬಂದಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


