Saturday, August 8, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಪ್ರತಾಪ್ ಸಿಂಹ ನಾಯಕ್ ಅವರಿಗೆ ಬಿಜೆಪಿ ಯುವಮೋರ್ಚಾದಿಂದ ಸನ್ಮಾನ

ಬೆಳ್ತಂಗಡಿ : ಪ್ರತಾಪ್ ಸಿಂಹ ನಾಯಕ್ ಅವರಿಗೆ ಬಿಜೆಪಿ ಯುವಮೋರ್ಚಾದಿಂದ ಸನ್ಮಾನ

- Advertisement -
- Advertisement -

ಬೆಳ್ತಂಗಡಿ : ವಿಧಾನ ಪರಿಷತ್ ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ವಿಧಾನಮಂಡಲ ಅಧಿವೇಶನಗಳಲ್ಲಿ ಪ್ರಬಲ ಧ್ವನಿಯಾಗಿ ಸೇವೆ ಸಲ್ಲಿಸಿದ ಬಿಜೆಪಿ ಹಿರಿಯ ಮುಖಂಡ ಪ್ರತಾಪ್ ಸಿಂಹ ನಾಯಕ್ ಅವರನ್ನು ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಆ.8 ರಂದು ಬೆಳ್ತಂಗಡಿಯಲ್ಲಿರುವ ಪ್ರತಾಪ್ ಸಿಂಹ ನಾಯಕ್ ಅವರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ಉಪಾಧ್ಯಕ್ಷರಾದ ಗಣೇಶ್ ಆರ್. ಲಾಯಿಲ, ಹರೀಶ್ ಗೌಡ ಸಂಭೋಲ್ಯ, ಪ್ರಕಾಶ್ ಪೂಜಾರಿ ಬಾರ್ಯ, ಸುಜಿತ್ ಪೆರಾಡಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ.ಕೆ. ಬಂದಾರು, ಸುಧೀರ್ ಪೂಜಾರಿ ಚಾರ್ಮಾಡಿ, ರಂಜು ಕೊಕ್ಕಡ, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ-ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಅಶ್ವಿನ್ ಅಂಡಿಂಜೆ, ಪ್ರಸಾದ್ ಸುಧೇಮುಗೇರು, ಮನೀಷ್ ಡಿ.ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಪವನ್ ಬಂಗೇರ ನಗರ, ಪ್ರದೀಪ್ ಕುಲಾಲ್ ಕಾಯರ್ತಡ್ಕ, ಸಂತೋಷ್ ಕುಮಾರ್ ಇಂದಬೆಟ್ಟು ಹಾಗೂ ಮಹಾಶಕ್ತಿ ಪ್ರಮುಖ ಲೋಕ್ಷತ್ ಸೇರಿದಂತೆ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

- Advertisement -

Latest News

error: Content is protected !!