Friday, November 20, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಯತೀಶ್ ಗೌಡ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳಿಗೂ ಜಾಮೀನು ಮಂಜೂರು

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಯತೀಶ್ ಗೌಡ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳಿಗೂ ಜಾಮೀನು ಮಂಜೂರು

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಕಳೆದ ಜೂನ್ 1ರಂದು ನಡೆದಿದ್ದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಉಳಿದಿಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ. ಕೆಲವೇ ದಿನಗಳ ಹಿಂದಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯದಿಂದ ಜಾಮೀನು ಲಭಿಸಿತ್ತು.

ಪ್ರಕರಣದ ಹಿನ್ನೆಲೆ: ಜೂನ್ 1ರಂದು ಬೆಳಗ್ಗೆ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿತ್ತು. ಬಳಿಕ ಮೃತ ವ್ಯಕ್ತಿ ಪೆರ್ನೆಯ ಯತೀಶ್ ಗೌಡ ಎಂಬುದು ದೃಢಪಟ್ಟಿದ್ದು, ಅವರ ಸಹೋದರ ನಿತಿನ್ ಮತ್ತು ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆ ಮಾಡಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಮೂವರು ಆರೋಪಿಗಳಿಗೂ ಜಾಮೀನು ಮಂಜೂರಾದಂತಾಗಿದೆ.

- Advertisement -

Latest News

error: Content is protected !!