Friday, October 9, 2026
HomeUncategorizedಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ...

ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

- Advertisement -
- Advertisement -

ಬೆಳ್ತಂಗಡಿ; : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಮಹಿಳೆಯರಿಗೆ ಕೇಂದ್ರ ಸರ್ಕಾರದ ಯೋಜನೆಗಳು ನಿಮ್ಮ ಕಲ್ಪನೆಯ ರಂಗೋಲಿಯಲ್ಲಿ ಅನ್ನುವ ವಿಷಯದಲ್ಲಿ ರಂಗೋಲಿ ಸ್ಪರ್ಧೆಯು ಅಕ್ಟೋಬರ್ 08 ರಂದು ಉಜಿರೆ ಶಾರದಾ ಮಂಟಪದಲ್ಲಿ ನೆರವೇರಿತು.
ಮಾಜಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್,ಈ ಕಾರ್ಯಕ್ರಮದ ನೇತೃತ್ವ ವಹಿಸಿದ ಪ್ರಭಾರಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ,ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್, ತುಳಸಿ ಉಮೇಶ್ ಮಾಲಾಡಿ, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ, ಕೋಶಾಧಿಕಾರಿ ಸಂಗೀತ ಶೆಟ್ಟಿ, ಈ ಸಂದರ್ಭದಲ್ಲಿ ಜಿಲ್ಲಾ ಮನ್ ಕೀ ಬಾತ್ ಸಂಯೋಜಕ್ ಸೀತಾರಾಮ್ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವಂತ್ ಗೌಡ ಪುದುವೆಟ್ಟು, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪುಷ್ಪಾವತಿ ಆರ್ ಶೆಟ್ಟಿ, ಉಷಾ ಕಾರಂತ್,ಮಾಜಿ ಉಪಾಧ್ಯಕ್ಷರಾದ ರವಿ ಬರಮೇಲು, ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷರಾದ ಸಿ ಕೆ ಚಂದ್ರಕಲಾ, ಪ್ರಮುಖರಾದ ದೇವಪ್ಪ ಗೌಡ ಸಾಯಿಕೃಪಾ,ಪ್ರಮೀಳಾ ವಿಶ್ವನಾಥ್, ನಾಗೇಶ್ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!