Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಇನ್ಸ್ಪೆಕ್ಟರ್ ಸಂದೇಶ್.ಪಿ.ಜಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ; ಬೆಳ್ತಂಗಡಿಗೆ ಆಗಮಿಸಿ ತನಿಖೆ ಆರಂಭಿಸಿದ...

ಬೆಳ್ತಂಗಡಿ : ಇನ್ಸ್ಪೆಕ್ಟರ್ ಸಂದೇಶ್.ಪಿ.ಜಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ; ಬೆಳ್ತಂಗಡಿಗೆ ಆಗಮಿಸಿ ತನಿಖೆ ಆರಂಭಿಸಿದ ಸಿಐಡಿ ತಂಡ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಗಿದ್ದ ಸಂದೇಶ್.ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಪ್ರಕರಣಗಳ ತನಿಖೆಗೆ ಸಿಐಡಿ ತಂಡ ಬೆಳ್ತಂಗಡಿಗೆ ಆಗಮಸಿದೆ.

ವೇಣೂರು ಪೊಲೀಸ್ ಠಾಣೆಯಿಂದ ಮಾ.25 ರಂದು ಬೆಂಗಳೂರು ಸಿಐಡಿ ಕಚೇರಿಗೆ ಹಸ್ತಾಂತರಿಸಿದ ಬಳಿಕ ಸಿಐಡಿ ಡಿವೈಎಸ್ಪಿ ಅಂಜನ್‌ ಕುಮಾರ್ ನೇತೃತ್ವದ ತಂಡ ಮಾ.31 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ನಾರಾವಿ ಐಬಿಗೆ ಆಗಮಿಸಿದ್ದಾರೆ.  ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಅತ್ಯಾಚಾರ ಪ್ರಕರಣವನ್ನು ಏಪ್ರಿಲ್ 1 ರಿಂದ ಆರಂಭಿಸಲಿದ್ದಾರೆ ಎಂದು ಸಿಐಡಿ ಮೂಲಗಳಿಂದ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!