Wednesday, July 15, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರಲ್ಲಿ ಒಬ್ಬನ...

ಬೆಳ್ತಂಗಡಿ: ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರಲ್ಲಿ ಒಬ್ಬನ ಬಂಧನ

- Advertisement -
- Advertisement -

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5.6 ವರ್ಷದ ಮಗುವಿನ ಮೇಲೆ ಎರಡು ಮಂದಿ ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

2023 ರಲ್ಲಿ ಸಂತ್ರಸ್ತ ಬಾಲಕಿ 5.6 ವರ್ಷದಾಕೆ ಆಗಿದ್ದ ಸಂದರ್ಭ ಈ ಕೃತ್ಯ ನಡೆದಿದ್ದು ಸಂತ್ರಸ್ತ ಮಗುವಿನ ಸಂಬಂಧಿ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಹಾಗೂ ಆತನ ಸ್ನೇಹಿತನಾದ ಮತ್ತೋರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಜೊತೆಗೂಡಿ 2023 ರಲ್ಲಿ, ಬೆಳ್ತಂಗಡಿಯಲ್ಲಿರುವ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದು ಹಾಗೂ ಬಾಲಕಿಗೆ ಜೀವಬೆದರಿಕೆ ಒಡ್ಡಿರುವುದು ತಿಳಿದುಬಂದಿರುತ್ತದೆ . ಈ ಬಗ್ಗೆ ದಿನಾಂಕ: 23.06.2026 ರಂದು ಸಂತ್ರಸ್ತ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ: 376, 376AB, 376DB, 506 ಜೊತೆಗೆ 34 ಐ.ಪಿ.ಸಿ ಮತ್ತು ಕಲಂ: 6 ಪೋಕ್ಸೋ ಕಾಯಿದೆ- 2012, ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಅದರಂತೆ ಕಾನೂನು ಸಂಘರ್ಷಕ್ಕೆ ಒಳಗಾದ ಓರ್ವ ಬಾಲಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಮುಂಬೈಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮೊಬೈಲ್ ಫೋನ್ ಗೆಳೆಯನಿಗೆ ನೀಡಿದ ಸಮಯದಲ್ಲಿ ಅದರಲ್ಲಿ ಸೆರೆ ಹಿಡಿಯಲಾದ ದೃಶ್ಯಾವಳಿಗಳನ್ನು ಗಮನಿಸಿ ಸ್ನೇಹಿತ ಈ ವಿಚಾರವನ್ನು ಸಂತ್ರಸ್ತ ಮಗುವಿನ ತಾಯಿಗೆ ತಿಳಿಸಿದ್ದು. ಈ ಸಂದರ್ಭ ಪ್ರಕರಣ ಬೆಳಕಿಗೆ ಬಂದು ಅವರು ವೇಣೂರು ಪೊಲೀಸ್ ಠಾಣೆಗೆ ಜೂ.23ರಂದು ದೂರು ನೀಡಿದ್ದಾರೆ.

- Advertisement -

Latest News

error: Content is protected !!