Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ: ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2...

ಬೆಳ್ತಂಗಡಿ: ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ-ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣದ ಅಗತ್ಯತೆಯನ್ನು ಮನಗಂಡು, ಸಂಬಂಧಿತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಶಾಲೆಯಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ, ಮೂಲಸೌಕರ್ಯಗಳ ಕೊರತೆ ಹಾಗೂ ಹೆಚ್ಚುತ್ತಿರುವ ಅಗತ್ಯತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರವು ಕಾಮಗಾರಿಗೆ ಅನುಮೋದನೆ ನೀಡಿ ರೂ.2.00 ಕೋಟಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಿವಾಸಿ ಹಾಗೂ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ, ಸುರಕ್ಷಿತ ವಸತಿ ವ್ಯವಸ್ಥೆ ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ನೂತನ ಕಟ್ಟಡ ನಿರ್ಮಾಣವು ಮಹತ್ವದ ಹೆಜ್ಜೆಯಾಗಲಿದೆ. ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ಪರಿಸರ ನಿರ್ಮಾಣವಾಗಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಉತ್ತೇಜನ ಸಿಗಲಿದೆ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯಪಟ್ಟಿದ್ದಾರೆ.

ಸದರಿ ಕಾಮಗಾರಿಗೆ ಅನುದಾನ ಮಂಜೂರು ಮಾಡಲು ಸಹಕರಿಸಿದ ರಾಜ್ಯ ಸರ್ಕಾರ ಹಾಗೂ ಮಾನ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಿಗೆ ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕ ಹರೀಶ್ ಪೂಂಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!