Friday, June 5, 2026
Homeಕರಾವಳಿಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ರಾಷ್ಟ್ರ ಮತ್ತು ರಾಜ್ಯಮಟ್ಟದ ಪ್ರಶಸ್ತಿ

ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ರಾಷ್ಟ್ರ ಮತ್ತು ರಾಜ್ಯಮಟ್ಟದ ಪ್ರಶಸ್ತಿ

- Advertisement -
- Advertisement -

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 4 ಬುಲ್ ಬುಲ್ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ನವದೆಹಲಿ ಇವರು ಆಯೋಜಿಸಿದ ಗೋಲ್ಡನ್ ಆ್ಯರೋ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಾಷ್ಟ್ರೀಯ ಪುರಸ್ಕಾರವನ್ನು ಪಡೆದಿರುತ್ತಾರೆ.

ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು

ರಾಜ್ಯಮಟ್ಟದ ಪ್ರಶಸ್ತಿ:
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಂಗಳೂರು, ರಾಜ್ಯ ಸಂಸ್ಥೆ ಆಯೋಜಿಸಿದ್ದ ಹೀರೆಕ್ ಗರಿ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ11 ಬುಲ್ ಬುಲ್ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರವನ್ನು ಪಡೆದಿರುತ್ತಾರೆ.

ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಹಾಗೆಯೇ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕ್ಯಾಪ್ಟನ್ ಪ್ರಮೀಳಾ ಇವರು ತರಬೇತಿಯನ್ನು ನೀಡಿರುತ್ತಾರೆ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ. ಆರ್ ಸಂಪೂರ್ಣ ಸಹಕಾರವನ್ನು ನೀಡಿರುತ್ತಾರೆ.

- Advertisement -

Latest News

error: Content is protected !!