Saturday, May 18, 2024
Homeಕರಾವಳಿಬೆಳ್ತಂಗಡಿ: ಅನಧಿಕೃತ ಬ್ಯಾನರ್ ವಿರುದ್ಧ ಏಕಾಂಗಿ ಧರಣಿ ಸತ್ಯಾಗ್ರಹ

ಬೆಳ್ತಂಗಡಿ: ಅನಧಿಕೃತ ಬ್ಯಾನರ್ ವಿರುದ್ಧ ಏಕಾಂಗಿ ಧರಣಿ ಸತ್ಯಾಗ್ರಹ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನಾದ್ಯಂತ ಉಚ್ಛ ನ್ಯಾಯಾಲಯ,ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಅನಧಿಕೃತವಾಗಿ ಅಳವಡಿಸಲಾಗಿರುವ ಬ್ಯಾನರ್ ತೆರವು ಮಾಡಲು ವಿಫಲವಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಮತ್ತು ಈ ಬಗ್ಗೆ ನಿರ್ಲಕ್ಷ್ಯತೆ ವಹಿಸಿರುವ ತಾಲೂಕ್ ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ವಿರುದ್ಧ ಬೆಳ್ತಂಗಡಿ ತಾಲೂಕು ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷರಾದ ಶೇಖರ್ ಎಲ್ ಲಾಯಿಲ ಇಂದು ದಿನಾಂಕ 05 ಸೋಮವಾರ ಬೆಳಗ್ಗೆ 10 ಗಂಟೆಯಿಂದ ತಾಲೂಕು ಪಂಚಾಯತ್ ಕಛೇರಿ ಬೆಳ್ತಂಗಡಿ ಮಂಭಾಗದಲ್ಲಿ ಬ್ಯಾನರ್ ಹಾಕಿಕೊಂಡು ಏಕಾಂಗಿಯಾಗಿ ಕುಳಿತು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಕಳೆದ 6 ತಿಂಗಳಿಂದ ನಿರಂತರವಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಲು ತಹಶಿಲ್ದಾರ್, ತಾಲೂಕ್ ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಮೊದಲಾದವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರೂ ಅವರ ಆದೇಶಗಳನ್ನು ಪಾಲಿಸುತ್ತಿಲ್ಲ ಇದರ ವಿರುದ್ಧ ಬ್ಯಾನರ್ ತೆರವು ಮಾಡುವವರೆಗೂ ಏಕಾಂಗಿಯಾಗಿ ಹೋರಾಟ ನಡೆಸುತ್ತೆನೆಂದು ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷರಾದ ಶೇಖರ್ ಎಲ್ ಲಾಯಿಲ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!