Sunday, October 18, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವನ್ಯಜೀವಿ ರಕ್ಷಿತಾರಣ್ಯದಲ್ಲಿ ಮರ ಕಡಿದ ಪ್ರಕರಣ: ಮರಗಳು ವಶಕ್ಕೆ; ಓರ್ವನ ವಿರುದ್ಧ ಪ್ರಕರಣ...

ಬೆಳ್ತಂಗಡಿ : ವನ್ಯಜೀವಿ ರಕ್ಷಿತಾರಣ್ಯದಲ್ಲಿ ಮರ ಕಡಿದ ಪ್ರಕರಣ: ಮರಗಳು ವಶಕ್ಕೆ; ಓರ್ವನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಲ್ತಾರ ಎಂಬಲ್ಲಿ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿ ಶರ್ಮಿಷ್ಠಾ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಅ.13 ರಂದು ಸ್ಥಳಕ್ಕೆ ದಾಳಿ ಮಾಡಿದ್ದಾರೆ‌.

ದಾಳಿ ವೇಳೆ 6 ಹಲಸಿನ ಮರದ ತುಂಡುಗಳು ಹಾಗೂ ಒಂದು ಹಲಸಿನ ಮರದ ದಿಮ್ಮಿಯನ್ನು ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಅ.14 ರಂದು ವನ್ಯಜೀವಿ ರಕ್ಷಣೆ ಕಾಯ್ದೆ 27,29,35,50,51,55 ಅಡಿಯಲ್ಲಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಎಸಿಎಫ್ ಅವರು ನಡೆಸಲಿದ್ದಾರೆ.

- Advertisement -

Latest News

error: Content is protected !!