Monday, June 8, 2026
Homeಕರಾವಳಿಕಾಸರಗೋಡುಬೆಳ್ತಂಗಡಿ : ಡಿವೈಎಸ್ಪಿ ನೇತೃತ್ವದಲ್ಲಿ ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ: ಐದು ಕಳ್ಳತನ ಪ್ರಕರಣ ಪತ್ತೆ...

ಬೆಳ್ತಂಗಡಿ : ಡಿವೈಎಸ್ಪಿ ನೇತೃತ್ವದಲ್ಲಿ ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ: ಐದು ಕಳ್ಳತನ ಪ್ರಕರಣ ಪತ್ತೆ ಹಚ್ಚಿದ ಪೊಲೀಸರು

- Advertisement -
- Advertisement -

ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ  ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ನಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ನಾಡು ನಿವಾಸಿ (ಹಾಲಿ ವಾಸ: ಕಾಸರಗೋಡು) ಜಾಬೀರ್ @ಜಾಬೀ (38) ಬಂಧಿತ ಆರೋಪಿಗಳು.

ದಿನಾಂಕ: 05.04.2026 ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದ ಮನೆಯಲ್ಲಿ 6 ಲಕ್ಷ ಹಣ ಮತ್ತು ಬಂಗಾರ ಸೇರಿ 19 ಲಕ್ಷದ ಚಿನ್ನಾಭರಣ ಕಳ್ಳತನ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ: 07-06-2026 ರಂದು ಆರೋಪಿ ಜಾಬೀರ್ @ಜಾಬೀ (38) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪುಂಜಾಲಕಟ್ಟೆ ಠಾಣಾ ಅ.ಕ್ರ: 38/2026 ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ರೂ 2,00,000/- ನಗದು ಮತ್ತು ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ: 28/2025 ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸೊತ್ತುಗಳ ಒಟ್ಟು ಮೌಲ್ಯ ರೂ 23,67,000/- ಗಳಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಈ ಪ್ರಕರಣಗಳನ್ನು ಹೊರತುಪಡಿಸಿದಂತೆ ಆರೋಪಿಗಳು ಉಪ್ಪಿನಂಗಡಿ ಠಾಣೆ, ಬಂಟ್ವಾಳ ನಗರ ಠಾಣೆ ಹಾಗೂ ಬೆಳ್ತಂಗಡಿ‌ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 05 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದ್ದು ತನಿಖೆ ಮುಂದುವರಿಯುತ್ತದೆ.

ಈ ಪ್ರಕರಣದ ಪತ್ತೆಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗಾಧೀಕ್ಷಕರಾದ ಶ್ರೀಮತಿ ರೋಹಿಸಿ ಸಿ.ಕೆ ರವರ ನೇತ್ರತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್‌, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್‌ ಹೆಚ್‌.ಇ, ಪುಂಜಾಲಕಟ್ಟೆ ಠಾಣಾ ಪಿ.ಎಸ್‌.ಐ ರಾಜೇಶ್‌ ಕೆ.ವಿ, ಸಿಬ್ಬಂದಿಗಳಾದ ಏ.ಎಸ್‌.ಐ ಬೆನ್ನಿಚ್ಚನ್‌, ಏ.ಎಸ್‌.ಐ ಸುಂದರ ಶೆಟ್ಟಿ, ಏ.ಎಸ್‌.ಐ ವಿಶ್ವನಾಥ್‌ ನಾಯ್ಕ್‌, ಪ್ರವೀಣ್‌ ಮೂರುಗೋಳಿ, ರಾಜೇಶ್‌ ಎನ್‌, ವಿಜಯ್‌ ಕುಮಾರ್‌ ರೈ, ರಾಹುಲ್‌ ರಾವ್‌, ಸಂತೋಷ್‌, ಬಸವರಾಜ್‌, ರಜಿತ್‌, ನಾಗರಾಜ್‌ ರವರು ಭಾಗಿಯಾಗಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್‌ ಮತ್ತು ಸಂಪತ್‌ ರವರು ಸಹಕರಿಸಿರುತ್ತಾರೆ.

- Advertisement -

Latest News

error: Content is protected !!