Friday, September 11, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವೇಣೂರಿನಲ್ಲಿ ಅನಧಿಕೃತವಾಗಿ ಬೃಹತ್ ಶಾಲೆ ನಿರ್ಮಾಣ: ಮಾಹಿತಿ ಇದ್ದರೂ ಕಣ್ಣು ಮುಚ್ಚಿ ಕುಳಿತ...

ಬೆಳ್ತಂಗಡಿ : ವೇಣೂರಿನಲ್ಲಿ ಅನಧಿಕೃತವಾಗಿ ಬೃಹತ್ ಶಾಲೆ ನಿರ್ಮಾಣ: ಮಾಹಿತಿ ಇದ್ದರೂ ಕಣ್ಣು ಮುಚ್ಚಿ ಕುಳಿತ ಅಧಿಕಾರಿ ವರ್ಗ

- Advertisement -
- Advertisement -

ಬೆಳ್ತಂಗಡಿ : ಸರಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಿ ಕಾನೂನು ಬಾಹಿರವಾಗಿ ಯಾವುದೇ ಅನುಮತಿಗಳನ್ನು ಪಡೆಯದೆ ಅನಧಿಕೃತವಾಗಿ ವೇಣೂರಿನಲ್ಲಿ ಬೃಹತ್ ಖಾಸಗಿ ಶಾಲೆಯ ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ನಿದ್ದೆಯಲ್ಲಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು, ಕರಿಮಣೇಲು ಗ್ರಾಮದಲ್ಲಿ ಮೂಡಬಿದಿರೆಯ ನಿವಾಸಿ ಡಾ.ಶರತ್ ಗೋರೆ ಎಂಬವರ ಮಾಲೀಕತ್ವದ “ಬ್ರೈಟ್ ಹಾರಿಜೋನ್ ಇಂಟರ್ ನ್ಯಾಷನಲ್ ಸ್ಕೂಲ್/ಬೆಸ್ಟ್ ವಸತಿ ಶಾಲೆ ಎಂಬ ಹೆಸರಿನಲ್ಲಿ ಅನಧಿಕೃತವಾಗಿ ಬೃಹತ್ ಮಹಡಿಯನ್ನು ನಿರ್ಮಾಣ ಕಾಮಗಾರಿ ಕೆಲಸ ಮಾಡುತ್ತಿದ್ದಾರೆ.

ಈ ಬೃಹತ್ ಕಟ್ಟಡಗಳಿಗೆ ಸಂಬಂಧಪಟ್ಟ ಪಂಚಾಯತ್ ನಿಂದ ಯಾವುದೇ ಅನುಮತಿಯನ್ನು ಪಡೆದುಕೊಂಡಿಲ್ಲ ಅದಲ್ಲದೆ ಈ ಕಟ್ಟಡ ನಿರ್ಮಾಣಕ್ಕೆ ಯಾವ ದಾಖಲೆಗಳನ್ನು ಮಾಡಿಕೊಂಡಿಲ್ಲ ಎಂಬ ದೂರುಗಳು ಬರುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೆ ಗಾಡ ನಿದ್ದೆಯಲ್ಲಿದ್ದಾರೆ ಎಂಬ ಆರೋಪಗಳನ್ನು ಸ್ಥಳೀಯರು ಮಾಡುತ್ತಿದ್ದಾರೆ.

ಈ ಅಕ್ರಮ ಕಟ್ಟಡ ಕಾಮಗಾರಿಯ ಮಾಡುತ್ತಿರುವ ಬಗ್ಗೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ವೇಣೂರು ಅಭಿವೃದ್ಧಿ ಅಧಿಕಾರಿಗಳಿಗೆ ಜ.12 ರಂದು ಲಿಖಿತ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ.

ವೇಣೂರಿನಲ್ಲಿ ಕಾನೂನು ಬಾಹಿರವಾಗಿ ಕಾಮಗಾರಿ ನಡೆಸುತ್ತಿರುವ “ಬ್ರೈಟ್ ಹಾರಿಜೋನ್ ಇಂಟರ್ ನ್ಯಾಷನಲ್ ಸ್ಕೂಲ್/ಬೆಸ್ಟ್ ವಸತಿ ಶಾಲೆ ಎಂಬ ಹೆಸರಿನಲ್ಲಿ ಕಟ್ಟಡಗಳ ವಿರುದ್ಧ ಅಧಿಕಾರಿಗಳು ನಿದ್ದೆಯಿಂದ ಎದ್ದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರ ಆಗ್ರಹವಾಗಿದೆ.

- Advertisement -

Latest News

error: Content is protected !!