Wednesday, November 4, 2026
HomeUncategorizedಬೆಳ್ತಂಗಡಿ : ಚಾರ್ಮಾಡಿ ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಚಾರ್ಮಾಡಿ ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಚಾರ್ಮಾಡಿ ಕಳ್ಳಬೇಟೆ ನಿಯಂತ್ರಣ ಕೇಂದ್ರದ ಬಳಿಯ ಸೇತುವೆಯಲ್ಲಿ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಹೊಸಮಠ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ ಡ್ಯಾಂಗೆ ಹೋಗುವ ದಾರಿಯ ಅರಣ್ಯ ಇಲಾಖೆಯ ಕಳ್ಳಬೇಟೆ ನಿಯಂತ್ರಣ ಕೇಂದ್ರದ ಬಳಿಯ ಸೇತುವೆಯಲ್ಲಿ 40-50 ವರ್ಷದ ಅಪರಿಚಿತ ವ್ಯಕ್ತಿಯ ಶವ ನ.4 ರಂದು ಬೆಳಗ್ಗೆ ಪತ್ತೆಯಾಗಿದೆ.ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಭಾರ ಸಬ್ ಇನ್ಸ್‌ಪೆಕ್ಟರ್ ಕಿಶೋರ್.ಪಿ ನೇತೃತ್ವದ ತಂಡ ಹಾಗೂ ಸೋಕೋ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮಂಗಳೂರು ಆಸ್ಪತ್ರೆಗೆ ಶವಪರೀಕ್ಷೆಗಾಗಿ ಕಳುಹಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!