Wednesday, June 3, 2026
Homeಕರಾವಳಿಬೆಳ್ತಂಗಡಿ; : ನೆರಿಯಕಾಡು ಎಂಬಲ್ಲಿ ಮಹಿಳೆಯ ಕೊಲೆ ಪ್ರಕರಣ; ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟ

ಬೆಳ್ತಂಗಡಿ; : ನೆರಿಯಕಾಡು ಎಂಬಲ್ಲಿ ಮಹಿಳೆಯ ಕೊಲೆ ಪ್ರಕರಣ; ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟ

- Advertisement -
- Advertisement -

ಬೆಳ್ತಂಗಡಿ; : ಇಲ್ಲಿನ ನೆರಿಯಕಾಡು ಎಂಬಲ್ಲಿ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶುಕ್ರವಾರ ತಿಳಿಸಿದೆ.

ಧರ್ಮಸ್ಥಳ ಸಮೀಪದ ನೆರಿಯ ಗ್ರಾಮದ ನೆರಿಯ ಕಾಡು ಕೊಟ್ಟಕ್ಕರ ನಿವಾಸಿ, ತೋಟದ ಕೆಲಸಗಾರ ಜಾನ್ಸನ್ ಕೆ.ಎಂ. ಎಂಬಾತ 2021ರ ಜನವರಿ 21ರಂದು ತನ್ನ 36ರ ಹರೆಯದ ಸೌಮ್ಯಾ ಫ್ರಾನ್ಸಿಸ್ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದೊಣ್ಣೆಯಿಂದ ಹಲ್ಲೆಗೈದಿದ್ದ.ಗಂಭೀರ ಗಾಯಗೊಂಡು ಅಸ್ವಸ್ಥಳಾದ ಸೌಮ್ಯಾಳನ್ನು ತನ್ನ ತಂದೆ ತಾಯಿಯ ಜೊತೆ ಸೇರಿ ಆರೋಪಿಯು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ಕರೆದೊಯ್ದಾಗ ಸೌಮ್ಯಾ ಫ್ರಾನ್ಸಿಸ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.

ಈ ಬಗ್ಗೆ ಸೌಮ್ಯಾಳ ಸಹೋದರ ಸನೋಜ್ ಫ್ರಾನ್ಸಿಸ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣವು ಧರ್ಮಸ್ಥಳ ಠಾಣೆಗೆ ವರ್ಗಾಯಿಸಲ್ಪಟ್ಟಿತ್ತು. ತನಿಖೆ ನಡೆಸಿದ್ದ ಬೆಳ್ತಂಗಡಿ ವೃತ್ತ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಇದು ಕೊಲೆಯಲ್ಲ, ಆದರೆ ನರಹತ್ಯೆ  ಎಂದು ನ್ಯಾಯಾಧೀಶ ಎಚ್.ಎಸ್.ಮಲ್ಲಿಕಾರ್ಜುನ ಸ್ವಾಮಿ ತೀರ್ಮಾನಿಸಿ ಶಿಕ್ಷೆಯ ಪ್ರಮಾಣ ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದ್ದರು. ಇದೀಗ ಅದನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

- Advertisement -

Latest News

error: Content is protected !!