ಬೆಳ್ತಂಗಡಿ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅಜಿಲಮೊಗರು ಗ್ರಾಮದ ಮಾವಿನಕಟ್ಟೆ ನಿವಾಸಿ ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ತಂದೆ ಮೊಹಮ್ಮದ್ ಅಹ್ಮದ್ ಕುಂಹಿ ಎಂಬಾತನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ, 232/2017 ಪ್ರಕರಣದಲ್ಲಿಯೂ ನ್ಯಾಯಾಲಯವು ವಾರೆಂಟ್ ಹೊರಡಿಸಿರುತ್ತದೆ ಹಾಗೂ ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ.63/2025 ಕಲಂ. 303(2) ಭಾರತೀಯ ನ್ಯಾಯಾ ಸಂಹಿತೆ – 2023 ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವುದು ತಿಳಿದುಬಂದಿರುತ್ತದೆ.
2 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತನಾದ ಆರೋಪಿ ಮೊಹಮ್ಮದ್ ಅಶ್ರಫ್ @ ಅಜ್ಜು ಎಂಬಾತನನ್ನು ದಿನಾಂಕ 26-05-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.


