- Advertisement -
![]()
- Advertisement -
ಬೆಳ್ತಂಗಡಿ : ಪತ್ನಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಸಂಬಂಧ 41/2019 ಕಲಂ 209(D) CRPC 498(A), 306 IPC ಪ್ರಕರಣದಲ್ಲಿ ಮಂಗಳೂರು 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕಳೆದ ನಾಲ್ಕು ತಿಂಗಳಿಂದ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪೆರ್ಲ ನಿವಾಸಿ ಅಣ್ಣು ಅವರ ಮಗ ಗಿರೀಶ್(39) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಜೂ.15 ರಂದು ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ 5 ಸಾವಿರ ದಂಡ ವಿಧಿಸಿ ಬಿಡುಗಡೆ ಮಾಡಿದೆ.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ. ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
- Advertisement -


