- Advertisement -
- Advertisement -
ಉಜಿರೆ: ಕೊರೋನಾ ಸಮಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೆಳ್ತಂಗಡಿ ತಾಲೂಕಿನ ಯಕ್ಷಗಾನ ಕಲಾವಿದರಿಗೆ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಆಹಾರ ಮತ್ತು ದಿನ ನಿತ್ಯಕ್ಕೆ ಬೇಕಾಗುವ ಅಗತ್ಯ ಸಾಮಾನುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ನ ಬೆಳ್ತಂಗಡಿ ತಾಲೂಕು ಸಂಚಾಲಕ ರಘುರಾಮ ಶೆಟ್ಟಿ, ಉಜಿರೆ ಪಂಚಾಯತ್ ಅಭಿವೃದ್ದಿ ಅಧಿಕಾರಿ ನೊಚ್ಚ ಪ್ರಕಾಶ್ ಶೆಟ್ಟಿ, ಜಯಂತ ಶೆಟ್ಟಿ ಕುಂಟಿನಿ, ಹಿರಿಯ ಕಲಾವಿದ ಶ್ರೀ ನರೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
- Advertisement -
