Thursday, June 4, 2026
Homeತಾಜಾ ಸುದ್ದಿಬೆಂಗಳೂರಿಗೆ ಬಿಗ್ ಶಾಕ್ : 23 ಪೌರ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ !

ಬೆಂಗಳೂರಿಗೆ ಬಿಗ್ ಶಾಕ್ : 23 ಪೌರ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ !

- Advertisement -
- Advertisement -

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಿಗ್ ಶಾಕ್ ಎದುರಾಗಿದ್ದು, ಇಲ್ಲಿನ ದೀಪಾಂಜಲಿ ನಗರದಲ್ಲಿ ಕೆಲಸ ಮಾಡುವ 23 ಪೌರ ಕಾರ್ಮಿಕರಿಗೆ ಕೊರೊನಾ ಸೋಂಕು ತಗುಲಿದೆ.

ಪಾದರಾಯನಪುರ, ಜೆಜೆ ನಗರ, ವಿಜಯ ನಗರ ಸುತ್ತ ಮುತ್ತಲೂ ಪ್ರದೇಶಗಳ 80 ಪೌರ ಕಾರ್ಮಿಕರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 23 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಈ ತಿಂಗಳ 21 ರಂದು ಜೆಜೆ ನಗರದ 54 ವರ್ಷದ ಪೌರ ಕಾರ್ಮಿಕನೊಬ್ಬ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದನು.

ಇನ್ನೂ. ಸೋಂಕಿತ ಪೌರ ಕಾರ್ಮಿಕರನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗುತ್ತಿದೆ, ಇವರ ಜೊತೆ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ. ಹಾಗೂ ಕುಟುಂಬ ಸದಸ್ಯರು, ಸಂಬಂಧಿಕರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ.

- Advertisement -

Latest News

error: Content is protected !!