ಬೆಂಗಳೂರು: ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಬಂದ ಸಿಬ್ಬಂದಿಗಳಿಗೆ ಮಹಿಳೆಯೊಬ್ಬರು ಅತ್ಯಾಚಾರದ ಕೇಸ್ ಹಾಕಿಸುತ್ತೇನೆ ಎಂದು ಅವಾಜ್ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೂರು ಜನ ಬ್ಯಾಂಕ್ ಸಿಬ್ಬಂದಿ ಸಾಲ ಪಡೆದ ಮಹಿಳೆಯ ಮನೆಗೆ ಬಂದಿದ್ದರು. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿ ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ಮಹಿಳೆಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್‍ಬುಕ್‍ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ.
ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರು ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರೀಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ನೆಟ್ಟಗರು ಛೀಮಾರಿ ಹಾಕುತ್ತಿದ್ದಾರೆ.


