Thursday, June 4, 2026
Homeಉದ್ಯಮಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಾಳೆಯಿಂದ BMTC ಸಂಚಾರ ಆರಂಭ

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಾಳೆಯಿಂದ BMTC ಸಂಚಾರ ಆರಂಭ

- Advertisement -
- Advertisement -

ಬೆಂಗಳೂರು: ನಾಳೆಯಿಂದ ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ನಿರ್ಧರಿಸಲಾಗಿದೆ. ಕಂಟೇನ್ಮೆಂಟ್ ವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ಸಚಿವರಾಗಿರುವ ಲಕ್ಷ್ಮಣ ಸವದಿ ಈ ಕುರಿತು ಮಾತನಾಡಿ, ನಾಳೆಯಿಂದ ಬಿಎಂಟಿಸಿ ಬಸ್ ಸಂಚಾರಕ್ಕೆ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಯವರೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಹಸಿರು, ಕಿತ್ತಳೆ, ಕೆಂಪು ವಲಯದಲ್ಲಿ ಬಸ್ ಸಂಚಾರ ಆರಂಭವಾಗಲಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದನಂತರ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ನಾಳೆಯಿಂದ ಬಸ್ ಸಂಚಾರ ಆರಂಭಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಗಸೂಚಿಗಳೊಂದಿಗೆ ನಾಳೆಯಿಂದ ಬಿಎಂಟಿಸಿ ಸೇವೆ ಆರಂಭಿಸಲಾಗುವುದು ಎಂದು ಹೇಳಲಾಗಿದೆ.

- Advertisement -

Latest News

error: Content is protected !!