Sunday, April 28, 2024
Homeತಾಜಾ ಸುದ್ದಿಬೆಂಗಳೂರು ನಗರ ಪೊಲೀಸ್ ಆಯುಕ್ತ 'ಭಾಸ್ಕರ್ ರಾವ್' ವರ್ಗಾವಣೆ

ಬೆಂಗಳೂರು ನಗರ ಪೊಲೀಸ್ ಆಯುಕ್ತ ‘ಭಾಸ್ಕರ್ ರಾವ್’ ವರ್ಗಾವಣೆ

spot_img
- Advertisement -
- Advertisement -

ಬೆಂಗಳೂರು : ಕೊರೊನಾ ಆರ್ಭಟದ ನಡುವೆಯೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ನೂತನ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ. ನಾಳೆ ರಾಜ್ಯ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ. ಆಗಸ್ಟ್ 2 ಕ್ಕೆ ಭಾಸ್ಕರ್ ರಾವ್ ಅವರ ಒಂದು ವರ್ಷ ಅವಧಿ ಮುಗಿಯುವುದರಿಂದ ಕಮಲ್ ಪಂಥ್ ನೇಮಕ ಮಾಡಲಾಗಿದೆ.

ಕಮಲ್ ಪಂತ್

ಭಾಸ್ಕರ್ ರಾವ್ ಅವರ ಸ್ಥಾನಕ್ಕೆ ಭಾಸ್ಕರ್ ರಾವ್ ಅವರ ಬ್ಯಾಚ್ ಮೇಟ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ರಾಜ್ಯ ಗುಪ್ತಚರ ಇಲಾಖೆಯ ಎಡಿಜಿಪಿ ಕಮಲ್ ಪಂತ್ ನೇಮಕವಾಗಿದ್ದಾರೆ. ರಾವ್ ಮತ್ತು ಪಂಥ್ 1990 ರ ಐಪಿಎಸ್ ಬ್ಯಾಚ್ ನವರು.

ಕಮಲ್ ಪಂತ್ ಅವರನ್ನು ನೇಮಕ ಮಾಡುವುದು ಬಹುತೇಕ ಖಚಿತವಾಗಿದ್ದು, ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ನಗರ ಪೊಲೀಸ್ ಆಯುಕ್ತ ಹುದ್ದೆಗೆ ಮೂವರು ಅಧಿಕಾರಿಗಳು ಮುಂಚೂಣಿಯಲ್ಲಿದ್ದರು, ಪಂಥ್ ಅವರ ಜೊತೆಗೆ ಸುನೀಲ್ ಅಗರ್ ವಾಲ್ ಮತ್ತು ಅಮೃತ್ ಪೌಲ್ ಕೂಡ ಆಕಾಂಕ್ಷಿಗಳಾಗಿದ್ದರು. ಅಮೃತ್ ಪೌಲ್ ಅವರನ್ನು ಇದೇ ವರ್ಷದ ಜನವರಿ ಅಂತ್ಯದಲ್ಲಿ ಎಡಿಜಿಪಿಯಾಗಿ ಬಡ್ತಿ ನೀಡಲಾಗಿತ್ತು. ಕಮಿಷನರ್ ಅವರ ಜೊತೆಗೆ ನಗರದ ಮತ್ತಷ್ಟು ಹಿರಿಯ ಅಧಿಕಾರಿಗಳ ವರ್ಗಾವಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!