Wednesday, May 15, 2024
Homeತಾಜಾ ಸುದ್ದಿಕನ್ನಡ ನಿಘಂಟು ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಇನ್ನಿಲ್ಲ

ಕನ್ನಡ ನಿಘಂಟು ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಇನ್ನಿಲ್ಲ

spot_img
- Advertisement -
- Advertisement -

ಬೆಂಗಳೂರು: ಕನ್ನಡ ಮತ್ತೊಂದು ಅಮೂಲ್ಯ ರತ್ನವೊಂದು ಮರೆಯಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ತಡರಾತ್ರಿ 1.30 ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. 107 ವರ್ಷದ ಇವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

1913 ಆಗಸ್ಟ್ 13 ರಂದು ಜನಿಸಿದ ಅವರು ಭಾಷಾ ತಜ್ಞ, ಸಂಶೋಧ,ಕ ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.
ಪ್ರೊ|| ಜಿ ವೆಂಕಟಸುಬ್ಬಯ್ಯ ಅವರು ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಕನ್ನಡ ನಿಘಂಟು ಶಾಸ್ತ್ರ ಪರಿಚಯ ಅವರ ಶ್ರೇಷ್ಠ ಗ್ರಂಥವಾಗಿದೆ.

ಇವರ ಭಾಷಾ ಸಾಹಿತ್ಯ ಸಾಧನೆಗೆ 2015ರಲ್ಲಿ, ಹಂಪೆ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನಿತ್ತು ಗೌರವಿಸಿದೆ. ಇವರು ಬೆಂಗಳೂರಿನಲ್ಲಿ ನಡೆದ 77 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು

ಅವರಿಗೆ ಬಂದ ಪ್ರಶಸ್ತಿಗಳು
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.
ಪಂಪ ಪ್ರಶಸ್ತಿ (2015)
ನಾಡೋಜ ಪ್ರಶಸ್ತಿ (2005)

1974 ರಲ್ಲಿ ಬೀದರನಲ್ಲಿ ನಡೆದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
2011ರಲ್ಲಿ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ 77ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
2014ನೇ ಸಾಲಿನ ಪಂಪ ಪ್ರಶಸ್ತಿ
2017ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ
2018ರ “ಭಾಷಾ ಸಮ್ಮಾನ್‌” (ಕೇಂದ್ರ ಸಾಹಿತ್ಯ ಅಕಾಡೆಮಿ)

- Advertisement -
spot_img

Latest News

error: Content is protected !!