Monday, May 19, 2025
Homeತಾಜಾ ಸುದ್ದಿಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸ್ಪರ್ಧಿಸೋದು ಫಿಕ್ಸ್

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸ್ಪರ್ಧಿಸೋದು ಫಿಕ್ಸ್

spot_img
- Advertisement -
- Advertisement -

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ  ಗೆಲುವು ಸಾಧಿಸಿರೋದರಿಂದ ಅಲ್ಲಿ ಶಾಸಕ ಸ್ಥಾನ ತೆರವು ಆಗಿರೋದರಿಂದ ಅಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಉಪಚುನಾವಣೆಗೆ  ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸೋದು ಬಹುತೇಕ ಖಚಿತ ಎನ್ನಲಾಗಿದೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸುಳಿವು ನೀಡಿರುವಂತ ನಿಖಿಲ್ ಕುಮಾರ್ ಅವರು, ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ.ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.

ಎರಡೂ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!