Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಉಜಿರೆ ನಿಯಂತ್ರಣ ತಪ್ಪಿದ ಬೆಂಝ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಚಾಲಕ...

ಬೆಳ್ತಂಗಡಿ : ಉಜಿರೆ ನಿಯಂತ್ರಣ ತಪ್ಪಿದ ಬೆಂಝ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಚಾಲಕ ಸಾವು

- Advertisement -
- Advertisement -

ಬೆಳ್ತಂಗಡಿ: ಉಜಿರೆಯಲ್ಲಿ ಬೆಂಝ್ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ ಘಟನೆ ಜೂ.29 ರಂದು (ಇಂದು) ಬೆಳಿಗ್ಗೆ 4 ಗಂಟೆ ಸುಮಾರಿಗೆ ನಡೆದಿದೆ.

ಉಜಿರೆ ಕಾಲೇಜು ರಸ್ತೆಯ ಬೆಳಾಲ್ ಕ್ರಾಸ್ ಬಳಿ ಬೆಂಝ್  ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕ ಬೆಳ್ತಂಗಡಿಯ ನಿವಾಸಿ  ಪ್ರಜ್ವಲ್ ನಾಯಕ್(30)  ಎಂಬವರು ಗಂಭೀರ ಗಾಯಗೊಂಡಿದ್ದರು.ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೆ ಅತೀಯಾದ ವೇಗವೇ ಕಾರಣ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ರಸ್ತೆ ಬದಿಯ ಬೀದಿ ದೀಪದ  ಕಂಬಗಳು ಮುರಿದು ಬಿದ್ದಿವೆ. ಈ ಬಗ್ಗ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!