Thursday, May 2, 2024
Homeತಾಜಾ ಸುದ್ದಿಈ ಶೈಕ್ಷಣಿಕ ವರ್ಷದಿಂದಲೇ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ

ಈ ಶೈಕ್ಷಣಿಕ ವರ್ಷದಿಂದಲೇ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ

spot_img
- Advertisement -
- Advertisement -

ವಿಜಯಪುರ : ಈ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ವಿಜಯಪುರದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಾಲೆಗಳಲ್ಲಿ ನೈತಿಕ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲಾಗುವುದು. ನೈತಿಕ ಶಿಕ್ಷಣ ಈಗಿನ ಅಗತ್ಯವಿದ್ದು, ರಾಮಾಯಣ, ಮಹಾಭಾರತ ಸೇರಿದಂತೆ ನೈತಿಕ ಗುಣ ಬೆಳೆಸುವ ಕತೆಗಳನ್ನು ಅಳವಡಿಸಲಾಗುವುದು ಎಂದಿದ್ದಾರೆ.

ಭಗವದ್ಗೀತೆ ಧಾರ್ಮಿಕ ಆಚರಣೆಯಲ್ಲ, ಪೂಜಾ ವಿಧಾನವೂ ಅಲ್ಲ, ಅದರ ಸಾರವನ್ನು ಎಲ್ಲ ಧರ್ಮೀಯರೂ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ, ಜೀವನಕ್ಕೆ ಬೇಕಾದ ಮಾರ್ಗದರ್ಶನ ಅದರಲ್ಲಿ ಅಡಗಿದೆ.ಭಗವದ್ಗೀತೆಯ ಯಾವ ಸಾರವನ್ನು ನೈತಿಕ ವಿಷಯದ ಪಠ್ಯದಲ್ಲಿ ಅಳವಡಿಸಬೇಕೆಂಬುದನ್ನು ಶೀಘ್ರದಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!