Sunday, June 7, 2026
Homeಕರಾವಳಿಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ಪ್ರಕರಣ; ಗಾಯಾಳುಗಳನ್ನು ಭೇಟಿ ಮಾಡಿದ ಸುಳ್ಯ ಶಾಸಕಿ...

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ಪ್ರಕರಣ; ಗಾಯಾಳುಗಳನ್ನು ಭೇಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

- Advertisement -
- Advertisement -

ಪುತ್ತೂರಿನಲ್ಲಿ  ಪೊಲೀಸರಿಂದ ಮಾರಾಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನುಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ  ವಿಚಾರಿಸಿ ಸಾಂತ್ವನ ಹೇಳಿದರು.

ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ ಎರಡೇ ದಿವಸದಲ್ಲಿ ಹೀಗಾದರೆ ಮುಂದಿನ ಐದು ವರ್ಷದಲ್ಲಿ ನಮ್ಮ ಯುವಕರು ಪರಿಸ್ಥಿತಿ ಏನಾಗಬಹುದು ಎಂಬುದು ಚಿಂತೆಯಾಗಿದೆ.‌ ಹಿಂದುಗಳ ಪರವಾಗಿ ವಿಧಾನಸೌಧದಲ್ಲಿ ಧ್ವನಿ ಎತ್ತಲು ನಾನು ಸಿದ್ಧಳಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಘಟನೆಯ ಬಗ್ಗೆ ಅವರು ಹಿಂದು ಮುಖಂಡ ಅರುಣ್‌ ಕುಮಾರ್ ಪುತ್ತಿಲ ಅವರಿಂದ ಮಾಹಿತಿ ಪಡೆದರು. ಅವರೊಂದಿಗೆ ಸುಳ್ಯದ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಇಂದಿರಾ ಬಿ.ಕೆ ಬಂಬಿಲ, ಸುಳ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಸುನೀಲ್ ಕೇರ್ಪಳ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಹೇಶ್ ರೈ ಮೇನಾಲ, ಸುಳ್ಯ ನಗರಸಭಾ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿ.ಪಂ. ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!